ಬೆಂಗಳೂರು: ರಾಜ್ಯ ಸರ್ಕಾರ ಮತ್ತೊಮ್ಮೆ ಮುಸ್ಲಿಂ ಓಲೈಕೆಗೆ ಮುಂದಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಸರ್ಕಾರವು ಮುಸ್ಲಿಂ ಸಮುದಾಯದ ಮೀಸಲಾತಿ ಹೆಚ್ಚಳಕ್ಕೆ ಮುಂದಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಗುತ್ತಿಗೆ ಮೀಸಲಾತಿ ಬಳಿಕ ಈಗ ವಸತಿ ಯೋಜನೆಯಲ್ಲಿ ಮೀಸಲಾತಿ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ ಎನ್ನಲಾಗುತ್ತಿದೆ.
ಇಂದಿನ ಕ್ಯಾಬಿನೆಟ್ ಸಭೆಯಲ್ಲಿ ಕೂಡ ಈ ವಿಷಯ ಚರ್ಚೆಯಾಗಿದೆ ಎನ್ನಲಾಗಿದೆ. ವಸತಿ ಇಲಾಖೆ ಸಚಿವ ಜಮೀರ್ ಅಹ್ಮದ್, ತಮ್ಮ ಸಮುದಾಯಕ್ಕೆ ವಸತಿ ಯೋಜನೆಯಲ್ಲೂ ಮೀಸಲಾತಿ ಹೆಚ್ಚಳಕ್ಕೆ ಮನವಿ ಮಾಡಿದ್ದಾರೆ.
ರಾಜ್ಯಾದ್ಯಂತ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಸತಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುವ ವಿವಿಧ ವಸತಿ ಯೋಜನೆಯಡಿ ನಿಗದಿಪಡಿಸುವ ಗುರಿಯಲ್ಲಿ ಅಲ್ಪಸಂಖ್ಯಾತರಿಗೆ ಶೇ. 10 ನಿಗದಿ ಪಡಿಸಲಾಗಿದೆ. ಈಗ ಶೇ. 10ರಷ್ಟು ಮೀಸಲಾತಿಯನ್ನು ಶೇ. 15ಕ್ಕೆ ಹೆಚ್ಚಿಸುವ ಬಗ್ಗೆ ವಿಷಯ ಪ್ರಸ್ತಾಪಿಸಿದ್ದಾರೆ ಎಂದು ತಿಳಿದು ಬಂದಿದೆ.