ಹಾಸನ: ಹಾಸನದ ಜಿಲ್ಲಾಧಿಕಾರಿ ಲತಾ ಕುಮಾರಿ ತಾಲೂಕಿನ ಗೊರೂರಿನಲ್ಲಿ ಇರುವ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸರ್ಕಾರಿ ಶಾಲೆಯಲ್ಲಿ ಬಿಸಿಯೂಟದ ವ್ಯವಸ್ಥೆ ಪರಿಶೀಲನೆಗೆ ಮುಂದಾದ ಜಿಲ್ಲಾಧಿಕಾರಿ, ಮಕ್ಕಳ ಜೊತೆ ಸರತಿ ಸಾಲಿನಲ್ಲಿ ಕುಳಿತುಕೊಂಡು ಊಟ ಹೇಗಿದೆ? ಹಾಲು ಚೆನ್ನಾಗಿದ್ದೀಯಾ? ಗುಣಮಟ್ಟದ ಊಟ ಕೊಡುತ್ತಿದ್ದಾರಾ ಎಂದು ಮಕ್ಕಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.