ಹಾಸನ: ಕಳೆದ ಮೂರು ದಿನಗಳಿಂದ ಮಲೆನಾಡು ಭಾಗ ಪಶ್ಚಿಮ ಘಟ್ಟ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆ, ಬಿಸಿಲೆ ಘಾಟ್ ರಾಜ್ಯ ಹೆದ್ದಾರಿಯಲ್ಲಿ ಗುಡ್ಡ ಕುಸಿತವಾಗಿದೆ.

ರಾಜ್ಯ ಹೆದ್ದಾರಿ 85ರ ಅಡ್ಡಹೊಳೆ ಸಮೀಪ ರಸ್ತೆ ಮೇಲೆ ಗುಡ್ಡ ಕುಸಿದಿದೆ. ಹೀಗಾಗಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

ಮುಂಜಾನೆ 3 ಗಂಟೆಯಿಂದ ಬಿಸಿಲೆ – ಕುಕ್ಕೆ ಸುಬ್ರಹ್ಮಣ್ಯ ಮಾರ್ಗದಲ್ಲಿ ವಾಹನ ಸಂಚಾರ ಬಂದ್ ಆಗಿದೆ. ಸಂಚಾರಕ್ಕೆ ಅಡ್ಡಿಯಾಗಿದೆ. ಸ್ಥಳಕ್ಕೆ ಕಂದಾಯ ಇಲಾಖೆ ಸಿಬ್ಬಂದಿ ಆಗಮಿಸಿ ಮಣ್ಣು ತೆರವು ಕಾರ್ಯಾಚರಣೆ ಆರಂಭಿಸಿದ್ದಾರೆ.