ಹಾಸನ: ಅಡಕೆ ಕಟಾವು ಮಾಡಿ ಸಾಗಿಸುತ್ತಿದ್ದ ಪಿಕಪ್ ವಾಹನ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ನಡೆದಿದೆ.
ಕಡೂರು ತಾಲೂಕಿನ ತಂಗ್ಲಿ ಗ್ರಾಮದ ನಿವಾಸಿಗಳಾದ ಶಬ್ಬೀರ್(55), ತಿಮ್ಮಣ್ಣ(53) ಮತ್ತು ಸಂಜಯ್(45) ಅಪಘಾತದಲ್ಲಿ ಮೃತಪಟ್ಟ ದುರ್ವೈವಿಗಳು. ಅಡಿಕೆ ಕಟಾವು ಮಾಡಿ ಸಾಗಿಸುತ್ತಿದ್ದ ಪಿಕಪ್ ವಾಹನದ ಟೈರ್ ಬ್ಲಾಸ್ಟ್ ಆಗಿ ಪಲ್ಟಿ ಹೊಡೆದಿದ ಪರಿಣಾಮ ಈ ಅವಘಡ ಸಂಭವಿಸಿದೆ ಎನ್ನಲಾಗುತ್ತಿದೆ. ಘಟನೆ ವೇಳೆ ವಾಹನದಲ್ಲಿದ್ದ ಮೂವರು ಸ್ಥಳದಲ್ಲೇ ಕೊನೆಯುಸಿರೆಳೆದರೆ, ಹಾಸನ ಮೂಲದ ನೌಶದ್ ಎಂಬುವವರು ಗಂಭೀರ ಗಾಯಗೊಂಡಿದ್ದು, ತಕ್ಷಣ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸದ್ಯ ಕಡೂರು ಆಸ್ಪತ್ರೆಗೆ ಗಾಯಾಳುಗಳನ್ನು ರವಾನೆ ಮಾಡಲಾಗಿದೆ.
ಇನ್ನು ತಿಮ್ಮಣ್ಣ ಮತ್ತು ಸಂಜಯ್ ಮೃತದೇಹವನ್ನು ಕಡೂರು ಸರ್ಕಾರಿ ಆಸ್ಪತ್ರೆ, ಶಬ್ಬೀರ್ ಮೃತದೇಹವನ್ನು ಅರಸೀಕೆರೆ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ನೂತನ ಎಸ್ಪಿ ಶುಭಾನ್ವಿತಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಘಟನಾ ಸಂಬಂಧ ಬಾಣಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂಓದಿ: 70ನೇ ವಯಸ್ಸಿನಲ್ಲೂ 702 ಕಿ.ಮೀ ಸೈಕಲ್ ತುಳಿದ ಸುರೇಶ್ ಕುಮಾರ್ : ಮೋದಿಯಿಂದ ಭಾರೀ ಮೆಚ್ಚುಗೆ!



















