ಹಾಸನ: ಕಂಬ ಏರಿ ವಿದ್ಯುತ್ ತಂತಿ ದುರಸ್ತಿ ಮಾಡುವಾಗ ವಿದ್ಯುತ್ ಪ್ರವಹಿಸಿ ಕಂಬದಿಂದ ಕೆಳಗೆ ಬಿದ್ದು, ಕಾರ್ಮಿಕನೊಬ್ಬ ಸಾವನ್ನಪ್ಪಿ ಮತ್ತೊಬ್ಬ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಈ ಘಟನೆ ಹಾಸನದ ಕಾಟೀಹಳ್ಳಿಯ ಟೀಚರ್ಸ್ ಕಾಲೋನಿಯಲ್ಲಿ ನಡೆದಿದೆ.
ಮೃತನನ್ನು ಬಿಹಾರ ಮೂಲದ ಬರಿಕುಲ್ (18), ಅವಘಡದಲ್ಲಿ ಸಲೀಂ (17) ಎಂಬಾತನಿಗೆ ಗಂಭೀರ ಗಾಯಗಳಾಗಿವೆ. ಇಬ್ಬರು ಕಂಬವೇರಿ ವಿದ್ಯುತ್ ತಂತಿ ದುರಸ್ತಿ ಮಾಡುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಕಾರ್ಮಿಕರಿಗೆ ಶಾಕ್ ಹೊಡೆಯುತ್ತಿದ್ದಂತೆ ಇನ್ನುಳಿದ ಮೂರು ಕಾರ್ಮಿಕರು ಅಲ್ಲಿಂದ ಓಡಿ ಹೋಗಿದ್ದಾರೆ.
ಗಾಯಗೊಂಡ ಯುವಕನನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ದಾಖಲೆ ಚಳಿಗೆ ಬೆಂಗಳೂರು ಗಡಗಡ | 8 ವರ್ಷಗಳಲ್ಲಿ ಕನಿಷ್ಠ ತಾಪಮಾನ ದಾಖಲು!



















