ಹಾಸನದ ಇತಿಹಾಸ ಪ್ರಸಿದ್ಧ ಹಾಸನಾಂಬೆ ದೇವಾಲಯದಲ್ಲಿ ಸಾರ್ವಜನಿಕ ದರ್ಶನಕ್ಕೆ ಭರ್ಜರಿಯಾಗಿ ಚಾಲನೆ ಸಿಕ್ಕಿದೆ. ಮೊದಲ ದಿನವೇ ಹಾಸನಾಂಬೆಯ ದರ್ಶನ ಪಡೆಯಲು ಭಕ್ತ ಮಹಾಸಾಗರವೇ ಹರಿದುಬಂದಿದ್ದು, ಸಾರ್ವಜನಿಕ ಸರತಿ ಸಾಲುಗಳು ಭರ್ತಿಯಾಗಿವೆ.
ದೇವಿಯ ದರ್ಶನಕ್ಕಾಗಿ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರ ದಂಡು ಜಮಾಯಿಸಿದ್ದು, ಭಕ್ತರ ಅನುಕೂಲಕ್ಕಾಗಿ ಜಿಲ್ಲಾಡಳಿತ ದಿನದ 24 ಗಂಟೆಯೂ ದರ್ಶನಕ್ಕೆ ಮಹತ್ವದ ಅವಕಾಶ ಕಲ್ಪಿಸಿದೆ. ಇಂದಿನಿಂದ ಸತತ ಹನ್ನೆರಡು ದಿನಗಳ ಕಾಲ ಹಾಸನಾಂಬೆಯ ದರ್ಶನಕ್ಕೆ ಭಕ್ತರಿಗೆ ಮುಕ್ತ ಅವಕಾಶ ಇರಲಿದ್ದು, ಈ ಬಾರಿಯೂ ದೇಶದ ಮೂಲೆ ಮೂಲೆಗಳಿಂದ ಲಕ್ಷಾಂತರ ಭಕ್ತರು ಆಗಮಿಸುವ ದೊಡ್ಡ ನಿರೀಕ್ಷೆ ಇದೆ.


















