ಹಾವೇರಿ : ಶೋಕಿಗಾಗಿ ಮನೆಗಳ ಕಳ್ಳತನ ಮಾಡ್ತಿದ್ದ ಅಪ್ರಾಪ್ತ ಬಾಲಕನನ್ನು ಹಾವೇರಿ ಜಿಲ್ಲೆ ಬ್ಯಾಡಗಿ ಪೊಲೀಸರು ಮಹತ್ವದ ಕಾರ್ಯಚರಣೆ ನಡೆಸಿ ಬಂಧಿಸಿದ್ದಾರೆ.
ಪ್ರವೀಣ ಕರಿಯಪ್ಪ ಎಂಬಾತ ಆರೋಪಿಯಾಗಿದ್ದಾನೆ. ಆರೋಪಿಯು ಮನೆ ಬಾಗಿಲು ಮುರಿದು ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದು, ಬರೋಬ್ಬರಿ 14 ಲಕ್ಷ ರೂ. ಬೆಲೆಯ ಚಿನ್ನಾಭರಣ ದೋಚಿದ್ದನು ಎನ್ನಲಾಗಿದೆ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಶೇಷ ತಂಡ ರಚಿಸಿ ಕಾರ್ಯಚರಣೆ ಇಳಿದಿದ್ದರು. ತನಿಖೆಯಲ್ಲಿ ತಿಳಿದಂತೆ ನಿತ್ಯ ಶೋಕಿಗಾಗಿ ಅಪ್ರಾಪ್ತ ವಯಸ್ಸಿನ ಆರೋಪಿ ಕಳ್ಳತನ ಮಾಡುತ್ತಿದ್ದನು ಎಂದು ತಿಳಿದುಬಂದಿದೆ. ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿ ಚಿನ್ನಾಭರಣ ಜಪ್ತಿ ಮಾಡಿದ್ದಾರೆ. ಈ ಘಟನೆ ಬ್ಯಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಇದನ್ನೂ ಓದಿ : ಇರಾನ್ನಲ್ಲಿ ಚಿಕ್ಕಮಗಳೂರಿನ ಯುವಕ ನಾಪತ್ತೆ.. ಪೋಷಕರು ಕಂಗಾಲು!



















