ಹಾವೇರಿ : ಆರ್ಟಿಸಿ ದುರಸ್ತಿ ಮಾಡಿಕೊಡಲು 12 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಶಿರಸ್ತೇದಾರ್ ಸೇರಿ ಮೂವರು ಸಿಬ್ಬಂದಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಜಿಲ್ಲೆಯ ಹಾನಗಲ್ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ನಡೆದಿದೆ.
ಶಿರಸ್ತೇದಾರ ತಮ್ಮಣ್ಣ ಕಾಂಬಳೆ, ದ್ವಿತೀಯ ದರ್ಜೆ ಸಹಾಯಕರುಗಳಾದ ಗೂಳಪ್ಪ ಮನಗೂಳಿ ಹಾಗೂ ಶಿವಾನಂದ ಬಡಿಗೇರ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು. ಬೊಮ್ಮನಹಳ್ಳಿ ಗ್ರಾಮದ ಶಂಕ್ರಪ್ಪ ಗುಮಗುಂಡಿ ಎಂಬುವರ ಆರ್ಟಿಸಿ ದುರಸ್ತಿ ಮಾಡಿಕೊಡಲು ಆರೋಪಿಗಳು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
ನವೀನ ಪಾಟೀಲ ಎಂಬುವರು ನೀಡಿದ ದೂರಿನ ಮೇರೆಗೆ ದಾಳಿ ನಡೆಸಿ ಮೂವರನ್ನು ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರು ಹಿಡಿದಿದ್ದಾರೆ. ಹಾವೇರಿ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.