ಹಾವೇರಿ: ದೇಶದ ಒಟ್ಟು 100 ಜಿಲ್ಲೆಯಲ್ಲಿ ಜಾರಿಯಾಗುತ್ತಿರುವ ಪ್ರಧಾನ ಮಂತ್ರಿ ʼಧನ್ ಧಾನ್ಯʼ ಕೃಷಿ ಯೋಜನೆಗೆ ಕರ್ನಾಟಕದ ಹಾವೇರಿ ಮತ್ತು ಗದಗ ಜಿಲ್ಲೆಗಳೂ ಸೆರ್ಪಡೆಯಾಗಿವೆ.
ಕೃಷಿ ಉತ್ಪಾದನೆ ಹೆಚ್ಚಳ, ನೀರಾವರಿ ಸೌಲಭ್ಯ, ಅಲ್ಪಾವಧಿ ಹಾಗೂ ದೀರ್ಘಾವಧಿ ಹಣಕಾಸು ನೆರವು ನೀಡುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ.
ಇಂದು ಪ್ರಧಾನಿ ನರೇಂದ್ರ ಮೋದಿ ವರ್ಚ್ಯುವಲ್ ಮೂಲಕ ಯೋಜನೆಗೆ ಚಾಲನೆ ನೀಡಲಿದ್ದಾರೆ. ಕೃಷಿ ವಿದ್ಯಾಲಯ ಕೇಂದ್ರ, ಹನುಮನಹಟ್ಟಿಯಲ್ಲಿ ಸಂಸದ ಬಸವರಾಜ ಬೊಮ್ಮಾಯಿ ಹಾವೇರಿ ಜಿಲ್ಲೆಯ “ಧನ ದಾನ್ಯʼ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.