ಬೆಂಗಳೂರು: ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಉದ್ಯೋಗ ಮಾಡಬೇಕು ಎಂದು ಬಯಸುತ್ತಿರುವವರಿಗೆ ಸುವರ್ಣಾವಕಾಶದ ಬಾಗಿಲು ತೆರೆದಿದೆ. ಹೌದು, ಕೇಂದ್ರ ಸರ್ಕಾರಿ ಸ್ವಾಮ್ಯದ ಹಿಂದೂಸ್ತಾನ್ ಕಾಪರ್ ಲಿಮಿಟೆಡ್ (HCL Supervisory Recruitment 2025) ಸಂಸ್ಥೆಯಲ್ಲಿ ಖಾಲಿ ಇರುವ 64 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಹಿಂದೂಸ್ತಾನ್ ಕಾಪರ್ ಲಿಮಿಟೆಡ್
ಹುದ್ದೆಗಳು: 64
ಹುದ್ದೆ ಹೆಸರು: ಸೂಪರ್ ವೈಸರ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಸಂದರ್ಶನದ ದಿನಾಂಕ: ಡಿಸೆಂಬರ್ 17
ಉದ್ಯೋಗ ಸ್ಥಳ: ದೇಶಾದ್ಯಂತ
ನವೆಂಬರ್ 27ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಡಿಸೆಂಬರ್ 17ರವರೆಗೆ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಬಿಎ, ಬಿ.ಕಾಂ, ಬಿಎಸ್ಸಿ, ಬಿ.ಇ, ಬಿ.ಟೆಕ್, ಎಲ್ ಎಲ್ ಬಿ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರು. ದೇಶದ ಯಾವುದೇ ಭಾಗದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಮೈನಿಂಗ್, ಸರ್ವೇ, ಎನ್ ವಿರಾನ್ ಮೆಂಟ್, ಎಲೆಕ್ಟ್ರಿಕಲ್, ಸಿವಿಲ್ ಸೇರಿ ಹಲವು ವಿಭಾಗಗಳಲ್ಲಿ ಸೂಪರ್ ವೈಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 1.2 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ hindustancopper.com ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಗಳ ಅಧಿಸೂಚನೆಯನ್ನು ಓದಿ ಅರ್ಹತೆ ಪರಿಶೀಲಿಸಬೇಕು.
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆದು, ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು
ಇದನ್ನೂ ಓದಿ: ಗುಪ್ತಚರ ಇಲಾಖೆಯಲ್ಲಿ 362 ಹುದ್ದೆಗಳ ನೇಮಕಾತಿ : 56 ಸಾವಿರ ರೂಪಾಯಿ ಸಂಬಳ



















