ಬೆಂಗಳೂರು : ರಾಜ್ಯದಲ್ಲಿ ಡಿಕೆಶಿ ಪರ್ವ ಶುರುವಾಗಿದೆ. ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಲೋಕಭವನ ಗ್ಲಾಸ್ಹೌಸ್ನಲ್ಲಿ ನಡೆದ ಅದ್ಧೂರಿ ಪದಗ್ರಹಣ ಸಮಾರಂಭದಲ್ಲಿ ಡಿ.ಕೆ. ಶಿವಕುಮಾರ್ ಅವರು ಸಂವಿಧಾನ ಪೀಠಿಕೆ ಹಿಡಿದುಕೊಂಡು ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.
ಈ ಬೆನ್ನಲ್ಲೇ ಡಿ.ಕೆ. ಶಿವಕುಮಾರ್ ಅವರಿಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಯವರು ಎಕ್ಸ್ (ಟ್ವೀಟ್ಟರ್) ಖಾತೆಯ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.
ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿರುವ ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳು. ತಮಗೆ ದೊರೆತಿರುವ ಈ ಅವಕಾಶವನ್ನು ಜನಪರ ಕೆಲಸಗಳಿಗೆ ಹಾಗೂ ಕರ್ನಾಟಕದ ಅಭಿವೃದ್ಧಿಗೆ ಉಪಯೋಗ ಮಾಡಿಕೊಳ್ಳಿ ಎಂದು ಆಶಿಸುತ್ತೇನೆ ಎಂದು ಹೆಚ್‌ಡಿಕೆ ಹಾರೈಸಿದ್ದಾರೆ.
ಇದನ್ನೂ ಓದಿ : ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಜಿ. ಪರಮೇಶ್ವರ್ ಪ್ರಮಾಣ ಸ್ವೀಕಾರ!


















