ಬೆಂಗಳೂರು: ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ ಮೇಲೆ ಹೆಚ್.ಡಿ ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ವಿಧಾನಸೌಧದ ಮುಂಭಾಗ ನಡೆದ ಅಂಬೇಡ್ಕರ್ ಅವರ 69ನೇ ಮಹಾ ಪರಿನಿರ್ವಾಣ ದಿನದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಪುಷ್ಪಾರ್ಚನೆ ಮಾಡಿದ ಬಳಿಕ ಮಾಧ್ಯಮ ವರದಿಗಾರರೊಂದಿಗೆ ಮಾತನಾಡಿ ಸಿಎಂ, ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ನಿನ್ನೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕೇಂದ್ರ ಶಿಕ್ಷಣ ಮಂತ್ರಿ ಧರ್ಮೇಂದ್ರ ಪ್ರಧಾನ್‌ಗೆ ಮನವಿ ಮಾಡಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿ, ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ.
ಇನ್ನು ಬೆಂಗಳೂರಿನಲ್ಲಿ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದು ಅವರಿಗೆ ಏನು ಅನಿಸಿದೆಯೋ ಅದನ್ನು ಕೇಂದ್ರಕ್ಕೆ ಬರೆದಿದ್ದಾರೆ. ಅದೆಲ್ಲ ಕೇಂದ್ರ ಸರ್ಕಾರಕ್ಕೆ ಬಿಟ್ಟ ವಿಚಾರ ಎಂದು ತಿಳಿಸಿದ್ದಾರೆ..
ಇದನ್ನೂ ಓದಿ: ಮುಂಬೈ ವಿಮಾನ ನಿಲ್ದಾಣದಲ್ಲಿ ಹೈಡ್ರಾಮಾ : ಇಂಡಿಗೋ ಕೌಂಟರ್ ಏರಿ ಕುಳಿತ ವಿದೇಶಿ ಮಹಿಳೆ



















