ಮಂಡ್ಯ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಇಂದು ಮಂಡ್ಯ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.ನಗರದಸುಮಾರು 14 ಕೋಟಿ ರೂಪಾಯಿ ವೆಚ್ಚದಲ್ಲಿ ಹೈಟೆಕ್ ಸೌಲಭ್ಯಗಳೊಂದಿಗೆ ನಿರ್ಮಾಣವಾಗುತ್ತಿರುವ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ನಗರದ ವಿಸಿ ಫಾರಂ ಆವರಣದಲ್ಲಿ ನಿರ್ಮಾಣವಾಗಲಿರುವ ಖೇಲೋ ಇಂಡಿಯಾ ಕ್ರೀಡಾಂಗಣಕ್ಕೆ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದು, ಜಿಲ್ಲೆಯ ಕ್ರೀಡಾಪಟುಗಳಿಗೆ ಇದು ಪ್ರಮುಖ ವೇದಿಕೆಯಾಗಲಿದೆ. ಕಾರ್ಯಕ್ರಮದ ವೇಳೆ ವಿಕಲಚೇತನ ಫಲಾನುಭವಿಗಳಿಗೆ ವಿದ್ಯುತ್ ಚಾಲಿತ ತ್ರಿಚಕ್ರ ವಾಹನಗಳನ್ನು ವಿತರಿಸುವ ಕಾರ್ಯಕ್ರಮವೂ ನಡೆಯಲಿದೆ.
ಕೇಂದ್ರ ಸಚಿವರ ಆಗಮನದ ಹಿನ್ನೆಲೆಯಲ್ಲಿ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಹೆಚ್ಚಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಜಿಲ್ಲೆಯ ಜೆಡಿಎಸ್ ನಾಯಕರು ಸಾವಿರಾರು ಸಂಖ್ಯೆಯಲ್ಲಿ ಜನರನ್ನು ಸೇರಿಸಲು ಸಿದ್ಧತೆ ನಡೆಸಿದ್ದಾರೆ.
ಇದನ್ನೂ ಓದಿ : ತಂಬಾಕು ಬೆಳೆಗಾರರ ನೆರವಿಗೆ ನಿಂತ ಕೇಂದ್ರ ಸರ್ಕಾರ!



















