ಹಾಸನ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಗ್ರಾಮದಲ್ಲಿರುವ ಪ್ರಸಿದ್ಧ ರಂಗನಾಥ ಸ್ವಾಮಿ ದೇವಸ್ಥಾನಕ್ಕೆ ಇಂದು ಬೆಳಗ್ಗೆ ಭೇಟಿ ನೀಡಿ ದರ್ಶನ ಪಡೆದರು.

ಈ ವೇಳೆ ರಂಗನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ ಅವರು, ಕುಟುಂಬದ ಮನೆ ದೇವರಿಗೆ ಭಕ್ತಿಯಿಂದ ಪ್ರಾರ್ಥನೆ ಸಲ್ಲಿಸಿದರು. ನಂತರ ನಡೆಯಲಿರುವ ಜನತಾ ಸಮಾವೇಶಕ್ಕೆ ತೆರಳುವ ಮುನ್ನ ದೇವರ ಆಶೀರ್ವಾದ ಪಡೆದರು.
ಮಾವಿನಕೆರೆ ರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಅವರ ಭೇಟಿ ವೇಳೆ ಭಕ್ತರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.
ಇದನ್ನೂ ಓದಿ : ಸಿಎಂ ಸಿದ್ದರಾಮಯ್ಯ ಅವರಿಗೆ ಸಿನಿಮಾ ವೀಕ್ಷಿಸಲು ಆಹ್ವಾನಿಸಿದ ‘ಲ್ಯಾಂಡ್ ಲಾರ್ಡ್’ ಚಿತ್ರತಂಡ



















