ದಾವಣಗೆರೆ: ದಾವಣಗೆರೆಯಲ್ಲಿ ಹೃದಯಾಘಾತಕ್ಕೆ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ.
ದಾವಣಗೆರೆ ತಾಲೂಕಿನ ಐಗೂರಿನಲ್ಲಿ ಈ ಘಟನೆ ನಡೆದಿದೆ. ಗೊಲ್ಲರಟ್ಟಿ ಜಯಪ್ಪ (44) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಗೊಲ್ಲರಟ್ಟಿ ಜಯಪ್ಪಗೆ ಎದೆನೋವು ಕಾಣಿಸಿಕೊಂಡಿದ್ದು, ಜಯಪ್ಪ ದಾವಣಗೆರೆ ಖಾಸಗಿ ಆಸ್ಪತ್ರೆಗೆ ನಡೆದುಕೊಂಡೇ ತೆರಳಿದ್ದಾರೆ. ಆನಂತರ ಎದೆನೋವು ತೀವ್ರವಾಗಿ ಕಾಣಿಸಿಕೊಂಡಿದೆ.
ಆತನ ಇಸಿಜಿ ಮಾಡಿದಾಗ ಆತನ ಸ್ಥಿತಿ ಗಂಭೀರವಾಗಿರುವುದು ಬೆಳಕಿಗೆ ಬಂದಿದೆ. ಕೂಡಲೇ ವೈದ್ಯರು, ಐಸಿಯುಗೆ ಶಿಫ್ಟ್ ಮಾಡಿ ಚಿಕಿತ್ಸೆ ನೀಡಿದ್ದಾರೆ. ಚಿಕಿತ್ಸೆ ಫಲಿಸದೆ ಐಸಿಯುನಲ್ಲಿ ಜಯಪ್ಪ ಸಾವನ್ನಪ್ಪಿದ್ದಾರೆ.