ಬೆಂಗಳೂರು: ಪ್ರಾಂಶುಪಾಲರು ಬೈದಿದ್ದಕ್ಕೆ ವಿದ್ಯಾರ್ಥಿನಿ (Student) ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಬೆಂಗಳೂರಿನ ಬಾಪೂಜಿನಗರದ ಫಹಾದ್ ಶಾಲೆಯಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿರುವ 10ನೇ ತರಗತಿ ಬಾಲಕಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಾಲಕಿ ಕಟ್ಟಡದಿಂದ ಜಿಗಿಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆದರೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ದೂರು ನೀಡಿಲ್ಲ. ಆದರೆ, ಬಾಲಕಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.