ಮಂಡ್ಯ: ಮಂಡ್ಯ ಜಿಲ್ಲೆಯ ಮಳವಳ್ಳಿ–ಕೊಳ್ಳೇಗಾಲ ರಸ್ತೆಯ ಗಗನಚುಕ್ಕಿ ಟೋಲ್ ಸಮೀಪ ಎರಡು ಕಾರುಗಳ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ವೇಗವಾಗಿ ಬಂದಿದ್ದ ಎರಡು ಕಾರುಗಳು ಮುಖಾಮುಖಿಯಾಗಿ ಡಿಕ್ಕಿಯಾಗಿದ್ದು, ಡಿಕ್ಕಿಯ ರಭಸಕ್ಕೆ ಕಾರುಗಳು ನಜ್ಜುಗುಜ್ಜಾಗಿದ್ದು, ಪ್ರಯಾಣಿಕರು ನರಳಾಡಿದ್ದಾರೆ.

ಘಟನಾ ಸ್ಥಳದ ಮೂಲಕ ಸಾಗುತ್ತಿದ್ದ ಮಳವಳ್ಳಿ ಶಾಸಕ ನರೇಂದ್ರಸ್ವಾಮಿ ಅವರು ತಕ್ಷಣವೇ ಸ್ಥಳೀಯರ ಸಹಾಯದಿಂದ ರಕ್ಷಣಾ ಕಾರ್ಯಕ್ಕೆ ಮುಂದಾಗಿ, ಕಾರಿನಲ್ಲಿ ಸಿಲುಕಿದ್ದ ಗಾಯಾಳುಗಳನ್ನು ಹೊರತೆಗೆದರು. ಗಾಯಾಳುಗಳಿಗೆ ಸ್ಥಳದಲ್ಲೇ ಪ್ರಾಥಮಿಕ ಚಿಕಿತ್ಸೆ ನೀಡುವ ಮೂಲಕ ಮಾನವೀಯತೆ ಮೆರೆದರು.
ಈ ಅಪಘಾತದಲ್ಲಿ ಒಟ್ಟು 12 ಮಂದಿ ಗಾಯಗೊಂಡಿದ್ದು, ಅವರಲ್ಲಿ 6 ಮಂದಿಗೆ ಗಂಭೀರ ಗಾಯಗಳಾಗಿವೆ. ನಂತರ ಗಾಯಾಳುಗಳನ್ನು ಆಂಬುಲೆನ್ಸ್ ಮೂಲಕ ಮಳವಳ್ಳಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.
ಇದನ್ನೂ ಓದಿ : ಫುಟ್ಪಾತ್ ಮೇಲೆ ನಾಯಿ ಮೂತ್ರ ಮಾಡಿದ್ದಕ್ಕೆ ಇಬ್ಬರು ಮಹಿಳೆಯರ ನಡುವೆ ಮಾರಾಮಾರಿ



















