ರಾಯಚೂರು ಜಿಲ್ಲೆಯಲ್ಲಿ ಪದವಿ ಹಾಗೂ ಪರವಾನಿಗೆ ಇಲ್ಲದೆ ಕ್ಲಿನಿಕ್ ತೆರೆದು ಚಿಕಿತ್ಸೆ ನೀಡುತ್ತಿದ್ದ ನಕಲಿ ವೈದ್ಯರ ವಿರುದ್ಧ ಆರೋಗ್ಯ ಇಲಾಖೆ ಸಮರ ಸಾರಿದೆ. ಪರವಾನಿಗೆ ಇಲ್ಲದೆ, ಬೇರೆಯವರ ಹೆಸರಿನಲ್ಲಿ ಮೆಡಿಕಲ್ ಹಾಗೂ ಕ್ಲಿನಿಕ್ಗಳನ್ನು ನಡೆಸುತ್ತಿದ್ದವರ ಮೇಲೆ ದಾಳಿ ನಡೆಸಲಾಗಿದೆ.
ಜಿಲ್ಲೆಯಾದ್ಯಂತ ಒಟ್ಟು 250 ನಕಲಿ ಕ್ಲಿನಿಕ್ಗಳು ಹಾಗೂ ಮೆಡಿಕಲ್ಸ್ಗಳಿಗೆ ನೋಟಿಸ್ ನೀಡಲಾಗಿದ್ದು, ಇದುವರೆಗೆ 30 ನಕಲಿ ವೈದ್ಯರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಲಿಂಗಸುಗೂರು ತಾಲ್ಲೂಕಿನ ಆನೆಹೋಸೂರು ಗ್ರಾಮದಲ್ಲಿ ದಾಳಿ ನಡೆಸಿದ ವೇಳೆ ರಾಶಿ ರಾಶಿ ಇಂಜೆಕ್ಷನ್ಗಳು ಪತ್ತೆಯಾಗಿದ್ದು, ಯಾವುದೇ ಅರ್ಹತೆ ಇಲ್ಲದವರು ಇಂಜೆಕ್ಷನ್ ನೀಡುತ್ತಿರುವುದು ಬೆಳಕಿಗೆ ಬಂದಿದೆ.



















