ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ.
ಜನರು ಹೃದಯ ತಪಾಸಣೆಗೆಂದು ಆಗಮಿಸುತ್ತಿದ್ದಾರೆ. ಹೀಗಾಗಿ ಜಯದೇವ ಓಪಿಡಿ ಫುಲ್ ಆಗಿದ್ದು, ರೋಗಿಗಳಿಂದ ತುಂಬಿ ತುಳುಕುತ್ತಿದೆ. ಹಾಸನ ಪ್ರಕರಣದ ಬಳಿಕೆ ಶೇ. 8ರಷ್ಟು ಜನರು ಹೃದಯ ಸಂಬಂಧಿ ಕಾಯಿಲೆ ಚಿಕಿತ್ಸೆಗೆಂದು ಆಗಮಿಸುತ್ತಿದ್ದಾರೆ. ಅಲ್ಲದೇ, ಹಲವರು ಹೃದಯ ತಪಾಸಣೆಗೆಂದು ಬರುತ್ತಿದ್ದಾರೆ.