ಬೆಂಗಳೂರು: ಉತ್ತರ ಕರ್ನಾಟಕದಲ್ಲಿ ಭಾರೀ ಶೀತಗಾಳಿ ಬೀಸುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಬೀದರ್ ಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಮುಂದಿನ ಮೂರು ದಿನಗಳ ಕಾಲ ಭಾರೀ ಶೀತಗಾಳಿ (Cold Wave) ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 10 ರಿಂದ 12 ಡಿಗ್ರಿ ಇದ್ದ ತಾಪಮಾನ ಏಕಾಏಕಿ 7 ಡಿಗ್ರಿಗೆ ಇಳಿಕೆಯಾಗುವ ಸಾಧ್ಯತೆ ಇದೆ. ಮೂರು ದಿನಗಳಲ್ಲಿ ಏಕಾಏಕಿ ಕನಿಷ್ಟ 5 ರಿಂದ 6 ಡಿಗ್ರಿಗೆ ತಾಪಮಾನ ಇಳಿಕೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
ಹೀಗಾಗಿ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಇತ್ತೀಚೆಗೆ ಬೀದರ್ ನಲ್ಲಿ ಸಂಪೂರ್ಣವಾಗಿ ತಾಪಮಾನ ಕುಸಿದಿದೆ. ಬೀದರ್ ಜಿಲ್ಲೆಯಲ್ಲಿ ಕನಿಷ್ಠ ತಾಪಮಾನ 7 ಡಿಗ್ರಿ ಸೆಲ್ಸಿಯಸ್ ಗೆ ಇಳಿಕೆಯಾಗಿದೆ. ಹೀಗಾಗಿ ಚಳಿಗೆ ಜನರು ತತ್ತರಿಸಿ ಹೋಗಿದ್ದಾರೆ.