ರಾಜ್ಯದಲ್ಲಿ ಮಳೆ ಆರ್ಭಟ ಮುಂದುವರೆದಿದೆ. ಮಳೆಯ ಅಬ್ಬರಕ್ಕೆ ಹೆಸ್ಕಾಂಗೆ ಭಾರೀ ನಷ್ಟ ಉಂಟಾಗಿದೆ.
ಹೆಸ್ಕಾಂ ವ್ಯಾಪ್ತಿಯ ಏಳು ಜಿಲ್ಲೆಗಳಲ್ಲಿ ವಿವಿಧೆಡೆ ವಿದ್ಯುತ್ ಕಂಬಗಳು ಧರೆಗುರುಳಿದಿದ್ದು, ಕಂಬ, ಪರಿವರ್ತಕಗಳಿಂದ 5.65 ಕೋಟಿ ನಷ್ಟವಾಗಿದೆ. ಅಲ್ಲದೆ ಕೆಲವೆಡೆ ವಿದ್ಯುತ್ ಪರಿವರ್ತಕಗಳು ಕೆಟ್ಟು ನಿಂತಿವೆ.
ಏಳು ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಳೆ ಗಾಳಿಯಿಂದ 4,156 ವಿದ್ಯುತ್ ಕಂಬಗಳು ನೆಲಕಚ್ಚಿದೆ. 196 ವಿದ್ಯುತ್ ಪರಿವರ್ತಕಗಳಿಗೆ ಹಾನಿಯಾಗಿದೆ. ಮೊದಲೇ ನಷ್ಟದಲ್ಲಿರೋ ಹೆಸ್ಕಾಂಗೆ ಹಾನಿಯಿಂದ ಬರೆ ಎಳೆದಂತಾಗಿದೆ.



















