ಬೆಂಗಳೂರು: ಹವಾಮಾನ ಇಲಾಖೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಇಲಾಖೆಯು ಎಲ್ಲೋ (ಹಳದಿ) ಅಲರ್ಟ್ ಘೋಷಿಸಿದೆ.
ಕಳೆದ ಎರಡು ಮೂರು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ಮಳೆ, ನಾಳೆಯಿಂದ ಮತ್ತೆ ಮೂರು ದಿನಗಳ ಕಾಲ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.


















