ಬೆಂಗಳೂರು : ಬಂಗಾಳ ಉಪಮಹಾಸಾಗರದಲ್ಲಿ ವಾಯುಭಾರ ಕುಸಿತ ಹಾಗೂ ಅರಬ್ಬೀ ಸಮುದ್ರದಲ್ಲಿ ಟ್ರಫ್ ಉಂಟಾಗಿರುವ ಪರಿಣಾಮ ರಾಜ್ಯದ ಹಲವೆಡೆ ಇಂದು ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಧಾರವಾಡ, ವಿಜಯಪುರ ಹಾಗೂ ರಾಯಚೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಇನ್ನು ಮೈಸೂರು, ಮಂಡ್ಯ, ತುಮಕೂರು, ಹಾವೇರಿ, ದಾವಣಗೆರೆ, ಗದಗ, ಬಳ್ಳಾರಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲೂ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಗಾಳಿಯ ವೇಗವು ಗಂಟೆಗೆ 30 ರಿಂದ 40 ಕಿ.ಮೀ. ವೇಗದಲ್ಲಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ : ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ-ಮಗುವಿನ ರಕ್ಷಣೆ ; ಕೈಮುಗಿದು ಜೀವ ಉಳಿಸಿದ ಇನ್ಸ್‌ಪೆಕ್ಟರ್ ಜಗದೀಶ್!



















