ಬೆಂಗಳೂರು: ಇಂದು ಬೆಂಗಳೂರಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ರಾಮನಗರ, ಕೋಲಾರ, ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಗಾಳಿಯು ಗಂಟೆಗೆ 30-40ಕಿ.ಮೀ ವೇಗದಲ್ಲಿ ಬೀಸಲಿದ್ದು,ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆಯ ಮಾಹಿತಿ ಹವಾಮಾನ ಇಲಾಖೆ ನೀಡಿದ್ದಾರೆ.