ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಜನ ಹೈರಾಣಾಗಿದ್ದಾರೆ.
ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದ್ದು, ಧಾರಾಕಾರವಾಗಿ ಸುರಿದ ಮಳೆಗೆ ಮನೆಯ ಗೋಡೆಯೊಂದು ಕುಸಿತಗೊಂಡಿದೆ. ಅದೃಷ್ಟವಶಾತ್ ಯಾವದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಕೊಪ್ಪ ತಾಲೂಕಿನ ಬಿಲ್ ಗದ್ದೆ ಗ್ರಾಮದಲ್ಲಿ ಘಟನೆ ಸಂಭವಿಸಿದ್ದು, ಬಿಲ್ ಗದ್ದೆ ಗ್ರಾಮದ ರಾಜಮ್ಮ ಎಂಬುವವರ ಮನೆಯ ಗೋಡೆ ಕುಸಿದಿದೆ. ರಾತ್ರಿ ಸುರಿದ ಮಳೆಗೆ ಏಕಾಏಕಿ ಮನೆಯ ಗೋಡೆ ಕುಸಿತಗೊಂಡಿದೆ. ಮನೆಯ ಒಂದು ಭಾಗದ ಗೋಡೆ ಸಂಪೂರ್ಣವಾಗಿ ಕುಸಿತಗೊಂಡಿದೆ.
ಶಬ್ದ ಬರುತ್ತಿದ್ದಂತೆ ಮನೆಯಿಂದ ಹೊರ ಬಂದು ಪ್ರಾಣಾಪಾಯಂದ ರಾಜಮ್ಮ ಮತ್ತು ಕುಟುಂಬದವರು ಬಚಾವಾಗಿದ್ದಾರೆ. ಸದ್ಯ, ಮನೆ ಕಳೆದುಕೊಂಡ ರಾಜಮ್ಮ ಕಂಗಾಲಾಗಿದ್ದಾರೆ.