ಬೆಂಗಳೂರು : ಬೆಂಗಳೂರು ಹಾಗೂ ಕರಾವಳಿ ಜಿಲ್ಲೆ ಸೇರಿದಂತೆ ಕರ್ನಾಟಕದಲ್ಲಿ ಮಳೆ ಮುಂದುವರೆದಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ವರುಣನ ಆರ್ಭಟಕ್ಕೆ ಬೆಂಗಳೂರು ನಗರದಲ್ಲಿ ವ್ಯಾಪಾರ ವಹಿವಾಟು ಮಂದಾಗತಿಯಲ್ಲಿ ಸಾಗುತ್ತಿದೆ. ಅಕ್ಟೋಬರ್ 24 ರಿಂದ ನವೆಂಬರ್ 2 ರವರೆಗೆ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಕೆಲವೊಮ್ಮೆ ವ್ಯಾಪಕವಾಗಿ ಹಾಗೂ ಕೆಲವೊಮ್ಮೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಹೇಳಿದೆ.
ಅಕ್ಟೋಬರ್ 28 ರಂದು ಅಲ್ಲಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಎಕ್ಸ್ ಸಂದೇಶದಲ್ಲಿ ತಿಳಿಸಿದೆ.



















