ರಾಜ್ಯದಲ್ಲಿ ಇಂದು ಕೂಡ ಮಳೆ ಮುಂದುವರೆದಿದ್ದು, ಹಲವೆಡೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈಗಾಗಲೇ ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ ಸೇರಿದಂತೆ ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.