ಕೇರಳದಲ್ಲಿ (Kerala) ವ್ಯಾಪಕ ಮಳೆ (Rain)ಯ ಮುನ್ಸೂಚನೆ ಸಿಕ್ಕಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನದಿಗಳು ಮತ್ತು ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿ ಹಲವೆಡೆ ಪ್ರವಾಹ ಭೀತಿ ಉಂಟಾಗಿದೆ. ಅಲ್ಲದೇ, ನಾಳೆಗೆ 9 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡುಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಐದು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಗಂಟೆಗೆ 40 ರಿಂದ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ನೀರಾವರಿ ವಿನ್ಯಾಸ ಮತ್ತು ಸಂಶೋಧನಾ ಮಂಡಳಿ, ಪತ್ತನಂತಿಟ್ಟ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿನ ಮಣಿಮಾಲ ಮತ್ತು ಮೊಗ್ರಾಲ್ ನದಿಗಳಲ್ಲಿ ನೀರಿನ ಮಟ್ಟ ಏರಿದ ಹಿನ್ನೆಲೆಯಲ್ಲಿ ‘ಅಪಾಯದ ಎಚ್ಚರಿಕೆ’ಗಳನ್ನು ನೀಡಿದೆ.