ಬೆಂಗಳೂರು: ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಸಿಲಿಕಾನ್ ಸಿಟಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಒಂದು ವಾರಗಳ ಕಾಲ ಬೆಂಗಳೂರಿನಲ್ಲಿ (Bengaluru) ಮುಂದಿನ ಒಂದು ವಾರ ಮಳೆಯಾಗುವ (Rain) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಮೇ 7 ಮತ್ತು ಮೇ 8ರಂದು ಗುಡುಗು-ಸಿಡಿಲಿನಿಂದ ಕೂಡಿದ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿಗೂ ಮುನ್ಸೂಚನೆ ನೀಡಲಾಗಿದೆ.