ಮುಂದಿನ ಮೂರು ಗಂಟೆಗಳ ಕಾಲ ಬೆಂಗಳೂರು ಸೇರಿದಂತೆ ಹಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಅಲ್ಲದೇ, ಹಲವಡೆ ಎರಡು ದಿನ ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ. ಹೀಗಾಗಿ ವಾಹನ ಸವಾರರು, ಪೊಲೀಸರು ಎಚ್ಚರದಿಂದ ಇರಬೇಕು. ಟ್ರಾಫಿಕ್ ಜಾಮ್ ಉಂಟಾಗುವ ಸಾಧ್ಯತೆ ಇರುವುದರಿಂದಾಗಿ ಎಚ್ಚರಿಕೆ ಮುಖ್ಯ ಎಂದು ಹೇಳಲಾಗಿದೆ.
ಅಲ್ಲದೇ, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಕೂಡ ಮುಂದಿನ ಎರಡು ದಿನ ಮಳೆಯಾಗುವ ಮುನ್ಸೂಚನೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ರಾಯಚೂರು, ಬಳ್ಳಾರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ ಜಿಲ್ಲೆಗಳಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.