ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಮುಂದಿನ ಮೂರು ಗಂಟೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಅಷ್ಟೇ ಅಲ್ಲದೇ, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಕೂಡ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು ಜಿಲ್ಲೆಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬಿರುಗಾಳಿ, ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.