ಬೆಂಗಳೂರು: ಈ ಬಾರಿಯೂ ಮಳೆರಾಯ ರಜೆ ಪಡೆಯದೆ ಹಲವೆಡೆ ಬೆಂಬಿಡದೆ ಸುರಿಯುತ್ತಿದ್ದಾನೆ. ಪರಿಣಾಮ ಹಲವಾರು ತೊಂದರೆಗಳಾಗುತ್ತಿವೆ. ಈ ಮಧ್ಯೆ ಮುಂದಿನ 5 ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆಂಧ್ರಪ್ರದೇಶದ ಕರಾವಳಿಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿದಿದೆ ಎನ್ನಲಾಗುತ್ತಿದ್ದು, ಮುಂದಿನ 5 ದಿನ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಮಲೆನಾಡು ಜಿಲ್ಲೆಗಳಿಗೆ ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಆ. 21ರ ವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಲ್ಲದೇ, ಈ ಜಿಲ್ಲೆಗಳಿಗೆ ಆ. 19 ಹಾಗೂ ಆ. 20ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದಂತೆ ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳಿಗೆ ಇಂದಿನಿಂದ ಆ.19ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.