ಬೆಂಗಳೂರು: ರಾಜ್ಯದಲ್ಲಿ (Karnataka) ಮಂದಿನ 6 ದಿನ ಭಾರೀ ಮಳೆಯಾಗುವ(Rain)ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD)ನೀಡಿದೆ.
ಈಗಾಗಲೇ ರಾಜ್ಯದ ಹಲವು ಪ್ರದೇಶಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಕರಾವಳಿ, ಮಲೆನಾಡು ಸೇರಿದಂತೆ ಹಲವು ಪ್ರದೇಶಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ. ಇಂದಿನಿಂದ 6 ದಿನಗಳವರೆಗೆ ಮಳೆ ಮುಂದುವರಿಯಲಿದೆ ಎಂದು ಯಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ಕರಾವಳಿಯ ಎಲ್ಲಾ ಜಿಲ್ಲೆಗಳಿಗೂ ಇಂದಿನಿಂದ 4 ದಿನ ಯೆಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ.
ಕಳೆದ ಒಂದು ವಾರದಿಂದ ರಾಜ್ಯದ ಕರಾವಳಿ ಭಾಗದಲ್ಲಿ ವರುಣ ಅಬ್ಬರಿಸುತ್ತಿದ್ದು, ಇಂದಿನಿಂದ 6 ದಿನಗಳವರೆಗೆ ಮಳೆ ಮುಂದುವರಿಯಲಿದೆ ಎಂದು ಯಹವಾಮಾನ ಇಲಾಖೆ ಹೇಳಿದೆ. ಹೀಗಾಗಿ ಕರಾವಳಿಯ ಎಲ್ಲಾ ಜಿಲ್ಲೆಗಳಿಗೂ ಇಂದಿನಿಂದ 4 ದಿನ ಯೆಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ (Bengaluru) 4 ದಿನ ಮೋಡ ಕವಿದ ವಾತಾವರಣವಿರಲಿದೆ. ಬೆಂಗಳೂರು ನಗರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.