ಇಲ್ಲಿಯವರೆಗೆ ಕೊಂಚ ಬಿಡುವು ನೀಡಿದ್ದ ಮಳೆರಾಯ ಮತ್ತೆ ಈಗ ಅಬ್ಬರಿಸುವ ಮುನ್ಸೂಚನೆ ನೀಡಿದ್ದಾನೆ.
ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ರಾಮನಗರ, ತುಮಕೂರಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನುಳಿದಂತೆ ಯಾದಗಿರಿ, ಕೋಲಾರ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೂಡ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈಗಾಗಲೇ ಬೆಂಗಳೂರು ಸೇರಿದಂತೆ ಹಲವೆಡೆ ಮಳೆ ಬೆಂಬಿಡದೆ ಸುರಿಯುತ್ತಿದೆ. ಆದರೂ ಕೆಲವಡೆ ರಜೆ ನೀಡಿತ್ತು. ಈಗ ಮತ್ತೆ ಅಬ್ಬರಿಸುವ ಮುನ್ಸೂಚನೆ ಸಿಕ್ಕಿದ್ದು, ಜನ-ಜೀವನ ಅಸ್ತವ್ಯಸ್ಥವಾಗುವ ಸಾಧ್ಯತೆ ಇದೆ. ಮಲೆನಾಡು, ಕರಾವಳಿ ಪ್ರದೇಶದ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.