ಬೆಂಗಳೂರು: ರಾಜ್ಯದಲ್ಲಿ ಸಾಕಷ್ಟು ಅಬ್ಬರಿಸಿದ್ದ ಮಳೆರಾಯ ಈಗ ವಿಶ್ರಾಂತಿ ಪಡೆಯುತ್ತಿದ್ದ. ಹಲೆವೆಡೆ ಈಗಾಗಲೇ ಚಳಿಗಾಲ ಆರಂಭವಾಗಿದೆ. ಈ ಮಧ್ಯೆಯೂ ಮಳೆರಾಯ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಬೆಂಗಳೂರು, ಬೆಂ.ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ, ಬಳ್ಳಾರಿ, ನ.13ರಿಂದ ನ.16ರವರೆಗೆ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ನ. 13ರಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಚಾಮರಾಜನಗರ, ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ನ. 14ರಿಂದ ಮುಂದಿನ 3 ದಿನ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ನ.14ರಿಂದ ಮುಂದಿನ 2 ದಿನ ಹಾಗೂ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರದಲ್ಲಿ ನ.15ರಿಂದ ನ.16ರವರೆಗೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


















