ಮಂಗಳೂರು: ಜಿಲ್ಲೆಯ ಹಲವೆಡೆ ವ್ಯಾಪಕ ಮಳೆಯಾಗುವ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಮಂಗಳೂರು ತಾಲೂಕಿನ (Mangaluru) ಎಲ್ಲಾ ಶಾಲಾ (School) ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ.
ಮಳೆಯಿಂದಾಗಿ ಅಂಗನವಾಡಿಯಿಂದ, ದ್ವಿತೀಯ ಪಿಯುಸಿವರೆಗಿನ ಸರ್ಕಾರಿ (PU Colleges), ಅನುದಾನಿತ, ಖಾಸಗಿ ಶಾಲೆಗಳಿಗೆ ರಜೆ ಘೋಷಿಸಿ ಮಂಗಳೂರು ತಹಶಿಲ್ದಾರ್ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಮಳೆರಾಯನ ಅಟ್ಟಹಾಸ ಮುಂದುವರೆದಿದೆ. ಹೀಗಾಗಿ ಅಲ್ಲಲ್ಲಿ ಜನ – ಜೀವನ ಅಸ್ತವ್ಯಸ್ಥಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಭೂ ಕುಸಿತ, ಗುಡ್ಡ ಕುಸಿತ ಪ್ರಕರಣಗಳು ಹೆಚ್ಚಾಗಿದೆ. ಹೀಗಾಗಿ ಇನ್ನಷ್ಟು ಪ್ರಾಕೃತಿಕ ವಿಕೋಪ ಸಂಭವಿಸುವ ಆತಂಕದ ಹಿನ್ನೆಲೆಯಲ್ಲಿ ಜಿಲ್ಲಾ ವ್ಯಾಪ್ತಿಯ ಗಿರಿತಾಣ, ಶಿಖರಗಳಲ್ಲಿ ಚಾರಣಕ್ಕೆ ಪ್ರವಾಸಿಗರು ತೆರಳದಂತೆ ನಿಷೇಧ ಹೇರಿ ಆದೇಶಿಸಲಾಗಿದೆ.
ನದಿ ಹಾಗೂ ಸಮುದ್ರ ತಟದಲ್ಲಿ ಈಜು ಮೋಜು-ಮಸ್ತಿ, ನೀರಿಗೆ ಇಳಿಯುವುದು, ಮೀನು ಹಿಡಿಯುವುದು ಸೇರಿದಂತೆ ಎಲ್ಲ ರೀತಿಯ ಜಲ ಬಳಕೆಗೆ ನಿಷೇಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.


















