ಮಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಮಳೆರಾಯನ ಅಬ್ಬರ ಶುರುವಾಗಿದ್ದು, ದಕ್ಷಿಣ ಕನ್ನಡ (Dakshina Kannada) ಜಿಲ್ಲೆಗೆ ಶನಿವಾರ ರೆಡ್ ಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ಮುಂಜಾಗೃತಾ ಕ್ರಮವಾಗಿ ಜಿಲ್ಲೆಯಾದ್ಯಂತ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಈಗಾಗಲೇ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು (Rain), ಶನಿವಾರ (ಮೇ 31) ರಂದು ಎಲ್ಲಾ ಶಾಲೆಗಳಿಗೆ (School) ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ವಿದ್ಯಾರ್ಥಿಗಳ (Student) ಸುರಕ್ಷತಾ ದೃಷ್ಟಿಯಿಂದ ಅಂಗನವಾಡಿಯಿಂದ ಫ್ರೌಡಶಾಲೆಯವರೆಗೆ ರಜೆ ಘೋಷಿಸಲಾಗಿದೆ.
ಈಗಾಗಲೇ ಜಿಲ್ಲೆಯಲ್ಲಿ ವ್ಯಾಪಕ ಮಳೆಯಿಂದಾಗಿ 6 ಜನ ಸಾವನ್ನಪ್ಪಿದ್ದಾರೆ. ಹಲವೆಡೆ ಜನ – ಜೀವನ ಅಸ್ತವ್ಯಸ್ಥಗೊಂಡಿದೆ. ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.