ತಿರುವನಂತಪುರಂ: ಕೇರಳದ ಹಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ.
ಕೇರಳದ (Kerala) 7 ಜಿಲ್ಲೆಗಳಲ್ಲಿ ಶನಿವಾರ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ತಿರುವನಂತಪುರಂ, ಕೊಲ್ಲಂ, ಅಲಪ್ಪುಳ, ಎರ್ನಾಕುಲಂ, ಕೋಝಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕೇರಳದಲ್ಲಿ ವ್ಯಾಪಕ ಮಳೆಯಿಂದಾಗಿ ಸಾವು- ನೋವುಗಳು ಸಂಭವಿಸಿವೆ. ಹಲವೆಡೆ ಜನ – ಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದೆ. ಮೇ 9 ರಿಂದ ಮೇ 23 ರವರೆಗೆ ಕೇರಳದಲ್ಲಿ ಮಳೆಗೆ ಸಂಬಂಧಿಸಿದಂತೆ ಕನಿಷ್ಠ 11 ಜನ ಸಾವನ್ನಪ್ಪಿದ್ದಾರೆ. ಕರಾವಳಿ ಪ್ರದೇಶದ ಜನರು ಎಚ್ಚರಿಕೆಯಿಂದ ಇರುವಂತೆ ಈಗಾಗಲೇ ಕೇರಳದಲ್ಲಿ ಸೂಚಿಸಲಾಗಿದೆ. ಬೀಚ್ ಹಾಗೂ ನದಿ ಪ್ರದೇಶಗಳತ್ತಿ ಹೋಗಬೇಡಿ ಎಂದು ಸೂಚಿಸಲಾಗಿದೆ. ರಾಜ್ಯಾದ್ಯಂತ 8 ಪರಿಹಾರ ಶಿಬಿರ ಆರಂಭಿಸಲಾಗಿದ್ದು, 223 ಮಂದಿಗೆ ವಸತಿ ಕಲ್ಪಿಸಲಾಗಿದೆ.