ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಜೋರಾಗಿದ್ದು, ಇನ್ನೂ ಕೆಲವು ದಿನ ಭಾರೀ ಮಳೆಯ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಎರಡ್ಮೂರು ದಿನ ಭಾರೀ ಮಳೆಯಾಗಿ, ಕಳೆದ ಎರಡು ದಿನಗಳಿಂದ ಮಳೆರಾಯ ಸ್ವಲ್ಪ ವಿಶ್ರಾಂತಿ ಪಡೆಯುತ್ತಿದ್ದಾನೆ. ಈಗ ಮತ್ತೆ ಮುಂದಿನ ಐದಾರು ದಿನಗಳ ಕಾಲ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು, ಮೇ 28ರ ವರೆಗೆ ರಾಜ್ಯದ ಹಲವೆಡೆ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ, ಮಲೆನಾಡು, ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲವು ಜಿಲ್ಲೆಗಳಿಗೆ ಮೆ.26ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಮೇ 24 ರಂದು ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ವ್ಯಾಪಕ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಉಡುಪಿ, ಉತ್ತರ ಕನ್ನಡ ಜಿಲ್ಲಾಡಳಿತ ಮೀನುಗಾರಿಕೆಯನ್ನ ಸಂಪೂರ್ಣ ನಿಷೇಧಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಮೇ 23 ರಿಂದ ಮೇ 27 ರ ವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.