ಬೆಂಗಳೂರು: ರಾಜ್ಯದಲ್ಲಿ ಬಿರು ಬಿಸಿಲಿನ ಮಧ್ಯೆಯೂ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಇಂದಿನಿಂದ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಬೀದರ್, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ ಸಿಕ್ಕಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅಲ್ಲದೇ, ವಿಜಯನಗರ, ರಾಮನಗರ, ಮಂಡ್ಯ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.