ಬೆಂಗಳೂರು: ರಾಜಧಾನಿ ಸಿಲಿಕಾನ್ ಸಿಟಿ (Bengaluru) ಸೇರಿದಂತೆ ರಾಜ್ಯದ ಕೆಲವೆಡೆ ಇಂದು ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಎರಡು ದಿನಗಳಿಂದ ಬೆಂಗಳೂರಿನಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಇಂದು ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅಲ್ಲದೇ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ವಿಜಯಪುರ, ಧಾರವಾಡ, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾದ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಗುಡುಗು -ಮಿಂಚಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.