ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೆಂಗಳೂರಲ್ಲಿ ಸೋಮವಾರ ಇಡೀ ದಿನ ಸುರಿದ ಭಾರಿ ಮಳೆಯಿಂದಾಗಿ ಜನ-ಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ.
ಮಾರುತಿ ಸೇವಾನಗರದಲ್ಲಿ ಬೃಹತ್ ಮರದ ಕೊಂಬೆ ಪಾದಚಾರಿಗಳ ಮೇಲೆ ಬಿದ್ದು ಶಾಲೆಗೆ ತೆರಳುತ್ತಿದ್ದ ಬಾಲಕಿ ಸೇರಿದಂತೆ 6 ಜನ ಗಾಯಗೊಂಡಿದ್ದಾರೆ. ಅಲ್ಲದೇ, ಘಟನೆಯಲ್ಲಿ ಮಹಿಳೆಯೊಬ್ಬರ ಕಾಲು ಮುರಿದಿದೆ. ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದೆ.
ಕುಂದಲಹಳ್ಳಿಯಿಂದ ವರ್ತೂರು ಸಂಪರ್ಕಿಸುವ ರಸ್ತೆ ಕೆಸರು ಗದ್ದೆಯಂತಾಗಿತ್ತು ರಸ್ತೆಯಲ್ಲಿ 2 ಅಡಿ ನೀರು ನಿಂತು 2 ಕಿಲೋ ಮೀಟರ್ವರೆಗೆ ವಾಹನ ಸವಾರರು ಸಂಕಷ್ಟ ಅನುಭವಿಸಿದರು ಸಿಲ್ಕ್ಬೋರ್ಡ್ ಜಂಕ್ಷನ್ ನಲ್ಲಿ ರಾಜಕಾಲುವೆ ತುಂಬಿ ನೀರು ರಸ್ತೆಗೆ ನುಗ್ಗಿತ್ತು. ಟ್ರಾಫಿಕ್ ಜಾಮ್ ನಲ್ಲಿ ಸವಾರರು ಸಿಕ್ಕು ಕಂಗಾಲಾದರು ಡಿಸಿಎಂ ಡಿಕೆ ಶಿವಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಆರೋಗ್ಯ ವಿಚಾರಿಸಿದ್ದಾರೆ.
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ರಾಮನಗರ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.