ರಾಜಧಾನಿ ಬೆಂಗಳೂರಿನಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಈಗಾಗಲೇ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಮುಂದಿನ 48 ಗಂಟೆಗಳ ಕಾಲ ಗುಡುಗು ಮತ್ತು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಸಲಾಗಿದೆ.



















