ಬೀದರ್ | ಜಿಲ್ಲೆಯಲ್ಲಿ ಇಂದು ಸಂಜೆ ಧಾರಾಕಾರ ಮಳೆಯ ನಡುವೆ ಭಯಾನಕ ಘಟನೆ ನಡೆದಿದೆ. ಸಿಡಿಲು ಬಡಿದು ನಾಲ್ವರು ರೈತರು ಗಂಭೀರವಾಗಿ ಗಾಯಗೊಂಡಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ಭಾಲ್ಕಿ ತಾಲೂಕಿನ ನಿಟ್ಟೂರ್ ಬಿ ಗ್ರಾಮದಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಮಳೆ ಆರಂಭವಾಗಿದ್ದು, ನಾಲ್ವರು ಗಿಡದ ಕೆಳಗೆ ಆಶ್ರಯ ಪಡೆದಿದ್ದರು. ಇದೇ ವೇಳೆ ಸಿಡಿಲು ಬಡಿದು ಅವಘಡ ಸಂಭವಿಸಿದೆ.
ಮಾಹಿತಿಗಳ ಪ್ರಕಾರ ಘಟನೆಯಲ್ಲಿ ಒಬ್ಬ ರೈತನಿಗೆ ತೀವ್ರ ಗಾಯವಾಗಿದ್ದು, ಇನ್ನೂ ಮೂವರಿಗೆ ಸ್ವಲ್ಪ ಪ್ರಮಾಣದಲ್ಲಿ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣವೇ ಬೀದರ್ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ : ಬೆಳಗಾವಿಯಲ್ಲಿ ವರುಣನ ಅಬ್ಬರ.. ನದಿಯಂತಾದ ರಸ್ತೆಗಳು, ಜನಜೀವನ ಅಸ್ತವ್ಯಸ್ತ!


















