ಶಿವಮೊಗ್ಗ : ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಜಿಲ್ಲೆಯಲ್ಲಿ ಇನ್ನೆರಡು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಶಿವಮೊಗ್ಗದ ಹೊಸನಗರ ತಾಲೂಕಿನ ನಗರ ಹೋಬಳಿಯಲ್ಲಿ ಮುಂದುವರೆದ ವರ್ಷಧಾರೆಯಿಂದಾಗಿ ಲಿಂಗನಮಕ್ಕಿ ಜಲಾಶಯದಲ್ಲಿ ಒಳ ಹರಿವು ಹೆಚ್ಚಾಗಿದ್ದು, ಇದೇ ರೀತಿ ಮಳೆ ಮುಂದುವರೆದರೆ ಈ ತಿಂಗಳ ಕೊನೆಯಲ್ಲಿ ಜಲಾಶಯ ಭರ್ತಿ ಆಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಈಗಾಗಲೇ ತಲುಪಿದ ಲಿಂಗನಮಕ್ಕಿ ಜಲಾಶಯ ನೀರಿನ ಮಟ್ಟ 1805.3 ಅಡಿಗೆ ತಲುಪಿದೆ. 31455 ಕ್ಯೂಸೆಕ್ ಜಲಾಶಯದ ಒಳಹರಿವು, 1876 ಕ್ಯೂಸೆಕ್ ಹೊರ ಹರಿವು ಇದೆ. ಒಟ್ಟು ಜಲಾಶಯ 1819 ಅಡಿ ಸಾಮರ್ಥ್ಯವನ್ನು ಹೊಂದಿದೆ.



















