ಧಾರವಾಡ: ಅವಳಿ ನಗರದಲ್ಲಿ ವ್ಯಾಪಕ ಮಳೆಯಾಗಿದ್ದು, ಗುಡುಗು ಸಹಿತ ಮಳೆಗೆ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಪರಿಣಾಮ ಸಿಡಿಲಿಗೆ ಓರ್ವ ವ್ಯಕ್ತಿ ಬಲಿಯಾಗಿದ್ದಾರೆ.
ಧಾರವಾಡದಲ್ಲಿ (Dharwad) ಸತತ ಒಂದು ಗಂಟೆಗಳ ಕಾಲ ವ್ಯಾಪಕ ಮಳೆಯಾಗಿದೆ. ಪರಿಣಾಮ ರಸ್ತೆ, ಗುಂಡಿಗಳಲ್ಲಿ ನೀರು ನಿಂತಿದ್ದು, ತಗ್ಗು ಪ್ರದೇಶಕ್ಕೆ ನೀರು ನುಗ್ಗಿದೆ. ಸಿಡಿಲು ಬಡಿದು ಮೇಕೆ ಮೇಯಿಸಲು ಹೋಗಿದ್ದ ವೃದ್ಧ ಸಾವನ್ನಪ್ಪಿದ್ದಾರೆ. ತಾಲೂಕಿನ ಮುಗದ ಗ್ರಾಮದ ಹೊಲದಲ್ಲಿ ರಸೂಲಸಾಬ್ ಚಾಂದವಾಲೆ (62) ಸಿಡಿಲಿಗೆ ಬಲಿಯಾಗಿದ್ದಾರೆ.
ಮೇಕೆ ಮೇಯಿಸಿಕೊಂಡು ಸಂಜೆ ವೇಳೆ ಮರಳಿ ಗ್ರಾಮಕ್ಕೆ ಬರುತ್ತಿದ್ದ ಸಂದರ್ಭದಲ್ಲಿ ಸಿಡಿಲು ಬಡಿದಿದೆ. ಪರಿಣಾಮ ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿ ಹಾಗೂ ಧಾರವಾಡ ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗಿದೆ.