ಉಡುಪಿ /ದಕ್ಷಿಣ ಕನ್ನಡ : ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ, ಐಟಿಐ ವಿದ್ಯಾರ್ಥಿಗಳಿಗೆ ಆ.28ರ ಗುರುವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶಿಸಿದ್ದಾರೆ.
ದ.ಕ. ಜಿಲ್ಲೆಯ ಮಂಗಳೂರು, ಪುತ್ತೂರು, ಮೂಲ್ಕಿ, ಮೂಡಬಿದಿರೆ, ಉಳ್ಳಾಲ ಹಾಗೂ ಬಂಟ್ವಾಳ ತಾಲೂಕಿನ ಎಲ್ಲಾ ಅಂಗನವಾಡಿ, ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಖಾಸಗಿ ವಿದ್ಯಾ ಸಂಸ್ಥೆಗಳಿಗೆ ರಜೆ ಘೋಷಿಸಿ ಆಯಾ ತಹಶೀಲ್ದಾರ್ ಆದೇಶಿಸಿದ್ದಾರೆ.
ಹವಾಮಾನ ಇಲಾಖೆಯ ಆರೆಂಜ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.
ಪೋಷಕರು ಮಕ್ಕಳು ತಗ್ಗು ಪ್ರದೇಶಗಳು, ಸರೋವರಗಳು, ಸಮುದ್ರ ತೀರ ಮತ್ತು ನದಿ ತೀರಗಳಿಗೆ ಹೋಗದಂತೆ ನೋಡಿಕೊಳ್ಳಬೇಕು. ಮೀನುಗಾರರಿಗೂ ನೀರಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಕಚೇರಿಯಲ್ಲಿ ಕಡ್ಡಾಯವಾಗಿ ಇರಬೇಕೆಂದು ತಿಳಿಸಲಾಗಿದೆ. ಜಿಲ್ಲಾಡಳಿತದಿಂದ ವಿವಿಧ ಹುದ್ದೆಗಳಿಗೆ ನೇಮಕಗೊಂಡ ನೋಡಲ್ ಅಧಿಕಾರಿಗಳು ಜಾಗರೂಕರಾಗಿರಬೇಕು ಮತ್ತು ಸಾರ್ವಜನಿಕ ದೂರುಗಳಿಗೆ ಸ್ಪಂದಿಸಬೇಕು ಎಂದು ಸೂಚಿಸಲಾಗಿದೆ.


















