ಬೆಂಗಳೂರು: ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ (Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ (IMD) ನೀಡಿದೆ.
ರಾಜ್ಯದ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿಯ ಮೂರು ಜಿಲ್ಲೆಗಳಿಗೂ ಸೋಮವಾರ ಹಾಗೂ ಮಂಗಳವಾರ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ಈ ಜಿಲ್ಲೆಗಳ ಶಾಲಾ -ಕಾಲೇಜುಗಳಿಗೆ ಕೂಡ ರಜೆ ಘೋಷಿಸಲಾಗಿದೆ. ಅಲ್ಲದೇ, ಆನಂತರದ ಮೂರು ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಒಳನಾಡಿಗೆ ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಘೋಷಿಸಿದ್ದು, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಸಾಧಾರಣ ಅಥವಾ ತುಂತುರು ಮಳೆಯಾಗುವ ಸಾಧ್ಯತೆಯಿದೆ. ನಗರದಲ್ಲಿ ಮುಂದಿನ ಮೂರ್ನಾಲ್ಕು ದಿನ ಮೋಡ ಕವಿದ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.