ಬೆಂಗಳೂರು: ರಾಜ್ಯದ ಹಲವೆಡೆ ಹಿಂಗಾರು ಮಳೆ ಅಬ್ಬರಿಸುತ್ತಿದ್ದು, ಅಕ್ಟೋಬರ್ ಮೊದಲ ವಾರಿ ಭಾರೀ ಮಳೆಯಾಗುವ ನಿರೀಕ್ಷೆಯನ್ನು ಹವಮಾನ ಇಲಾಖೆ ನೀಡಿದೆ.
ರಾಜ್ಯ ರಾಜಧಾನಿಯಲ್ಲಿ ಕೂಡ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಈಗ ಹವಾಮಾನ ಇಲಾಖೆಯು ರಾಜ್ಯದಲ್ಲಿ ಮಳೆಯ ಮುನ್ಸೂಚನೆ ನೀಡಿದೆ. ಅ. 9ರ ವರೆಗೂ ರಾಜ್ಯದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ.
ಅ.7ರ ವರೆಗೆ ಬೆಂಗಳೂರಲ್ಲಿ ಸಾಧಾರಣ ಮಳೆ ಇರಲಿದೆ. ಅ.4, 5ರಂದು ದಕ್ಷಿಣ ಒಳನಾಡಿನ ಬೆಂಗಳೂರು, ರಾಮನಗರ, ದಾವಣಗೆರೆ, ಮಂಡ್ಯ, ಚಿಕ್ಕಮಗಳೂರು, ಕೋಲಾರ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಅ. 9ರ ವರೆಗೆ ಕರಾವಳಿಯ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಪ್ರದೇಶದಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.