ರಾಜ್ಯಕ್ಕೆ ಮುಂಗಾರು ಮಳೆ ಪ್ರವೇಶವಾಗಿದ್ದು, ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಮಲೆನಾಡಿನ ಕೊಡಗು, ಚಿಕ್ಕಮಗಳೂರು ಸೇರಿದಂತೆ 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನಿತರ ಜಿಲ್ಲೆಗಳಾದ ಬಾಗಲಕೋಟೆ, ಯಾದಗಿರಿ, ಹಾವೇರಿ, ಗದಗ, ಹಾಸನದಲ್ಲಿ ಯಲ್ಲೋ ಅಲರ್ಟ್, ಬೆಳಗಾವಿ, ಕಲಬುರಗಿ, ವಿಜಯಪುರ, ಬೀದರ್ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಈ ಬಾರಿ ಮುಂಗಾರು ಮಳೆ ಉತ್ತಮವಾಗಿ ಸುರಿಯುವ ಮುನ್ಸೂಚನೆ ಇದ್ದು, ಪ್ರವಾಹ, ಭೂಕುಸಿತದ ಭೀತಿ ಹೆಚ್ಚಾಗಿದೆ. ಹೀಗಾಗಿ ಜನರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.